ಹರಿಯಾಣ ವಿಧಾನಸಭಾ ಚುನಾವಣೆ ಫಲಿತಾಂಶ: ಮಾಜಿ ಕುಸ್ತಿಪಟು ವಿನೇಶ್ ಪೋಗಟ್ ಗೆ ಗೆಲುವು ಚಂಢೀಗಢ, ಅಕ್ಟೋಬರ್,8,2024 (..):ಇಂದು ಹರಿಯಾಣ ಮತ್ತು ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಮಾಜಿ ಕುಸ್ತಿಪಟು ವಿನೇಶ್ ಪೋಗಟ್ ಜಯಭೇರಿ ಬಾರಿಸಿದ್ದಾರೆ. ಜಿಂದ್ ಜಿಲ್ಲೆಯ ಜೂಲಾನಾ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಕುಸ್ತಿಪಟು ವಿನೇಶ್​ ಫೋಗಟ್​ ಬಿಜೆಪಿಯ ಯೋಗೇಶ್​ ಕುಮಾರ್​ ಅವರ ವಿರುದ್ಧ 6 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಮೊದಲ ಚುನಾವಣೆಯಲ್ಲೇ ಜಯ ದಾಖಲಿಸಿದ್ದಾರೆ. 90 ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ 48 ಕ್ಷೇತ್ರಗಳಲ್ಲಿ ಕಾಂಗ್ರೆಸ್​ 36, ಇತರೆ 4 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಇನ್ನು ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್ 51 , ಬಿಜೆಪಿ 27 ಕ್ಷೇತ್ರ, ಪಿಡಿಪಿ 4 , ಇತರೇ 8 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. : , , , ,