ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ ನಾಲ್ವರು ವಿದ್ಯಾರ್ಥಿಗಳು ಅಮಾನತು. ಮಂಗಳೂರು ಡಿಸೆಂಬರ್‌ 9,2022(..):ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ ಆರೋಪದ ಮೇಲೆ ನಾಲ್ವರು ಮುಸ್ಲಿಂ ವಿದ್ಯಾರ್ಥಿಗಳನ್ನು ಅಮಾನತು ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ವಾಮಂಜೂರಿನ ಖಾಸಗಿ ಕಾಲೇಜಿನಲ್ಲಿ ನಾಲ್ವರು ವಿದ್ಯಾರ್ಥಿಗಳನ್ನ ಅಮಾನತು ಮಾಡಲಾಗಿದೆ. ನಾಲ್ವರು ವಿದ್ಯಾರ್ಥಿಗಳು ಬುರ್ಖಾ ಧರಿಸಿ ವೇದಿಕೆಯಲ್ಲಿ ನೃತ್ಯ ಮಾಡಿದ್ದರು. ಈ ವಿಡಿಯೋ ವೈರಲ್ ಆಗಿತ್ತು. ಇದಕ್ಕೆ ಭಾರಿ ಆಕ್ಷೇಪ ವ್ಯಕ್ತವಾಗಿತ್ತು. ಈ ಬೆನ್ನಲ್ಲೆ ಕಾಲೇಜು ಆಡಳಿತ ಮಂಡಳಿ ಡ್ಯಾನ್ಸ್ ಮಾಡಿದ ನಾಲ್ವರನ್ನ ಅಮಾನತು ಮಾಡಿದೆ. : – - - – -