ಡಿ. 12ರಂದು 2ನೇ ಬಾರಿ ಗುಜರಾತ್ ಸಿಎಂ ಆಗಿ ಭೂಪೇಂದ್ರ ಪಟೇಲ್ ಪ್ರಮಾಣವಚನ. ಅಹಮದಾಬಾದ್,ಡಿಸೆಂಬರ್,8,2022(..):ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದ್ದು ಇದೀಗ ಹಾಲಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರೇ 2ನೇ ಬಾರಿಗೆ ಗುಜರಾತ್ ಸಿಎಂ ಆಗಿ ಡಿಸೆಂಬರ್ 12 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಗುಜರಾತ್ ನಲ್ಲಿ ಬಿಜೆಪಿ 157 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು ಗೆಲುವು ಖಚಿತವಾಗಿದೆ. ಈ ಬಾರಿಗೂ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಡಿಸೆಂಬರ್ 12ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಭಾಗವಹಿಸಲಿದ್ದಾರೆ. ಭೂಪೇಂದ್ರ ಪಟೇಲ್ ಅವರು 50,000 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಭೂಪೇಂದ್ರ ಪಟೇಲ್, ‘ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಐತಿಹಾಸಿಕ ವಿಜಯಕ್ಕಾಗಿ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಅಭಿನಂದಿಸಿದ್ದಾರೆ. ಗುಜರಾತ್​ನ ಜನರಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ’ ಎಂದು ತಿಳಿಸಿದ್ದಾರೆ. : - – – 2nd –- 12th