ವಿಧಾನಸಭಾ ಚುನಾವಣಾ ಫಲಿತಾಂಶ: ಗುಜರಾತ್ ನಲ್ಲಿ ಬಿಜೆಪಿ ಮುನ್ನಡೆ: ಹಿಮಾಚಲ ಪ್ರದೇಶದಲ್ಲಿ ಎರಡು ಪಕ್ಷಗಳ ನಡುವೆ ಬಿಗ್ ಫೈಟ್. ಅಹಮದಬಾದ್,ಡಿಸೆಂಬರ್,8,2022(..):ದೇಶದ ಗಮನ ಸೆಳೆದಿರುವ ಗುಜರಾತ್​ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆಗಳ ಚುನಾವಣಾ ಫಲಿತಾಂಶ ಹೊರಬೀಳುತ್ತಿದೆ. ಈ ಮಧ್ಯೆ ಗುಜರಾತ್ ನಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದರೇ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಗುಜರಾತ್ ನಲ್ಲಿ 143 ಕ್ಷೇತ್ರಗಳಲ್ಲಿ ಬಿಜೆಪಿ, 27 ಕ್ಷೇತ್ರಗಳಲ್ಲಿ ಕಾಂಗ್ರೆಸ್ 8 ಕ್ಷೇತ್ರಗಳಲ್ಲಿ ಆಪ್ ಮುನ್ನಡೆ ಸಾಧಿಸಿವೆ. ಹಿಮಾಚಲ ಪ್ರದೇಶದಲ್ಲಿ68 ಕ್ಷೇತ್ರಗಳ ಪೈಕಿ 33 ಕ್ಷೇತ್ರಗಳಲ್ಲಿ ಬಿಜೆಪಿ 31 ಕಾಂಗ್ರೆಸ್ 3 ಕ್ಷೇತ್ರಗಳಲ್ಲಿ ಇತರೆ ಮುನ್ನಡೆ ಸಾಧಿಸಿದ್ದಾರೆ. : –- -- .