ಎಲ್ಲರೂ ತಮ್ಮ ಮತದಾನದ ಹಕ್ಕು ಚಲಾಯಿಸಬೇಕು- ವೋಟಿಂಗ್ ಬಳಿಕ ಪ್ರಧಾನಿ ಮೋದಿ ಮನವಿ. ಅಹಮದಾಬಾದ್,ಡಿಸೆಂಬರ್,5,2022(..):ಗುಜರಾತ್ ವಿಧಾನಸಭಾ ಚುನಾವಣೆಯ 2ನೇ ಹಂತದ ಮತದಾನ ಈಗಾಗಲೇ ಪ್ರಾರಂಭವಾಗಿದ್ದು, ಜನರು ಹಾಗೂ ರಾಜಕೀಯ ನಾಯಕರು ಗಣ್ಯರು ತಮ್ಮ ಮತದಾನದ ಹಕ್ಕು ಚಲಾಯಿಸುತ್ತಿದ್ದಾರೆ. ಅಹಮದಾಬಾದ್ ​ನ ಸಬರಿಮತಿ ಕ್ಷೇತ್ರದ ರಾಣಿಪ್ ಮತಗಟ್ಟೆಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಮತದಾನ ಮಾಡಿದರು. ಬಳಿಕ ಮಾತನಾಡಿದ ಅವರು, ಎಲ್ಲರೂ ತಮ್ಮ ಹಕ್ಕು ಚಲಾಯಿಸಬೇಕು. ಗುಜರಾತ್ ಚುನಾವಣೆ ಜೊತೆಗೆ ದೇಶಾದ್ಯಂತ ಹಲವೆಡೆ ಉಪಚುನಾವಣೆಗಳು ಕೂಡ ನಡೆಯುತ್ತಿವೆ. ಈ ಚುನಾವಣೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಿ ನರೇಂದ್ರ ಮೋದಿ ಜನರಿಗೆ ಮನವಿ ಮಾಡಿದರು. ಹಾಗೆಯೇ ಮತದಾನ ಪ್ರಕ್ರಿಯೆಯೆಲ್ಲಿ ಭಾಗಿಯಾಗುತ್ತಿರುವ ಜನತೆಗೆ ಧನ್ಯವಾದ . ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಾಡುವುದು ಎಲ್ಲರ ಹಕ್ಕು. ಶಾಂತಿಯುತ ಮತದಾನಕ್ಕೆ ವ್ಯವಸ್ಥೆ ಮಾಡಿದ ಚುನಾವಣಾ ಆಯೋಗಕ್ಕೆ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದರು. : - – - … : , 5, 2022 (..): , . . ’ . “ . ,” . .: / /