ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣ ತನಿಖೆಗೆ ಸೂಚನೆ- ಸಿಎಂ ಬೊಮ್ಮಾಯಿ. ಬೆಂಗಳೂರು,ಡಿಸೆಂಬರ್,2,2022(..):ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಸಿಎಂ ಬಸವರಜ ಬೊಮ್ಮಾಯಿ, ಯಾರೇ ತಪ್ಪು ಮಾಡಿದರೂ ಕ್ರಮ ಕೈಗೊಳ್ಳಲಾಗುತ್ತದೆ. ಪೊಲೀಸರು ಯುವಕನ ಮೇಲೆ ಹಲ್ಲೆ ಮಾಡಿಲ್ಲ ಎಂದಿದ್ದಾರೆ. ಮಹಾರಾಷ್ಟ್ರದವರು ಅನಗತ್ಯವಾಗಿ ವಿವಾದ ಮಾಡುತಿದ್ದಾರೆ ಎಂದು ಹೇಳಿದರು. ಅಲ್ಪಸಂಖ್ಯಾತ ಮತದಾರರ ಹೆಸರು ಡಿಲಿಟ್ ಮಾಡಿದ್ದಾರೆಂಬ ಆರೋಪ ಸುಳ್ಳು. ಈ ಕುರಿತು ಚುನಾವಣಾ ಆಯೋಗ ಗಮನಿಸಿದೆ. ದೂರು ಬಂದಕಡೆ ಕ್ರಮ ಕೈಗೊಳ್ಳಲು ಹೇಳಿದ್ದೇವೆ. ಅನಧಿಕೃತ ಮತದಾರರನ್ನ ತೆಗೆದು ಹಾಕಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು. : – – – – - .