: ಜಾವೆಲಿನ್ ಥ್ರೋನಲ್ಲಿ ಫೈನಲ್ ಗೆ ಎಂಟ್ರಿ ಕೊಟ್ಟ ಭಾರತದ ನೀರಜ್ ಚೋಪ್ರಾ ಪ್ಯಾರಿಸ್,ಆಗಸ್ಟ್,6,2024 (..):ಪ್ಯಾರಿಸ್ ಒಲಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕದ ನಿರೀಕ್ಷೆ ಹುಟ್ಟಿದ್ದು, ಜಾವೆಲಿನ್ ಥ್ರೋನಲ್ಲಿ ಭಾರತದ ನೀರಜ್ ಚೋಪ್ರಾ ಫೈನಲ್ ಪ್ರವೇಶಿಸಿದ್ದಾರೆ. ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಅವರು ಅದ್ಭುತ ಪ್ರದರ್ಶನ ನೀಡಿದ್ದು, ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯ ಫೈನಲ್ ಗೆ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ಮೊದಲ ಪ್ರಯತ್ನದಲ್ಲಿ 89.34 ಮೀಟರ್ ದೂರವನ್ನು ಎಸೆದು ಫೈನಲ್ ನಲ್ಲಿ ತಮ್ಮ ಸ್ಥಾನವನ್ನು ಕಾಯ್ದಿರಿಸಿಕೊಂಡರು. ಆಗಸ್ಟ್ 8 ರಂದು ರಾತ್ರಿ 11:55 ಕ್ಕೆ ಫೈನಲ್ ನಲ್ಲಿ ನೀರಜ್ ಚೋಪ್ರಾ ಸ್ಪರ್ಧಿಸಲಿದ್ದಾರೆ. : , , ,