ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಇಂದಿನಿಂದಲೇ ಹಣ ಜಮೆ ಮಂಡ್ಯ,ಆಗಸ್ಟ್​​ ,6,2024 (..):) ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಿಹಿಸುದ್ದಿ ನೀಡಿದ್ದು, ಇಂದಿನಿಂದಲೇ ಖಾತೆಗೆ ಹಣ ಜಮಾವಣೆ ಆಗುತ್ತದೆ ಎಂದು ತಿಳಿಸಿದ್ದಾರೆ. ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾಂತ್ರಿಕ ಕಾರಣದಿಂದ ಜೂನ್​ ಮತ್ತು ಜುಲೈ ಎರಡು ತಿಂಗಳ ಹಣ ಜಮೆ ಆಗಿರಲಿಲ್ಲ. ಇವತ್ತಿನಿಂದ ಜೂನ್, ಜುಲೈ ತಿಂಗಳ ಹಣ ಖಾತೆಗೆ ಜಮೆ ಆಗಲಿದೆ ಎಂದು ತಿಳಿಸಿದರು. ಲೋಕಸಭೆ ಚುನಾವಣೆಯ ನಂತರ ಕಳೆದ ಎರಡು ತಿಂಗಳಿನಿಂದ ಗೃಹಲಕ್ಷ್ಮೀ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ವರ್ಗಾವಣೆಯಾಗಿರಲಿಲ್ಲ. : , , ,