ಮಹಾರಾಷ್ಟ್ರದಲ್ಲಿ ಮತ್ತೆ ಪುಂಡಾಟ: ಕರ್ನಾಟಕ ಸಾರಿಗೆ ಬಸ್ ಮೇಲೆ ಕಲ್ಲು ತೂರಾಟ. ಬೆಳಗಾವಿ,ನವೆಂಬರ್,26,2022(..):ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಮಹಾರಾಷ್ಟ್ರ ಸಿಎಂ ಏಕನಾಥ್ ಸಿಂಧೆ ಒಲವು ತೋರಿದರೂ ಇತ್ತ ಕೆಲಪುಂಡರು ಮತ್ತೆ ಪುಂಡಾಟ ಮೆರೆದಿದ್ದಾರೆ. ಮಹಾರಾಷ್ಟ್ರದಲ್ಲಿ ಕರ್ನಾಟಕ ಸಾರಿಗೆ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಮಿರಜ್ -ಕಾಗವಾಡ ಮಾರ್ಗಮಧ್ಯೆ ಪುಂಡರು ಕರ್ನಾಟಕ ಬಸ್ ಮೇಲೆ ಕಲ್ಲು ತೂರಿ ಪುಂಡಾಟ ಮೆರೆದಿದ್ದಾರೆ. ಬೆಳಗಾವಿಯ ಅಥಣಿ ಡಿಪೋಗೆ ಸೇರಿದ ಬಸ್ ಪುಣೆಯಿಂದ ಅಥಣಿಗೆ ಬರುತಿತ್ತು. ಈ ವೇಳೆ ಕೃತ್ಯ ನಡೆದಿದೆ. ಬೆಳಗಾವಿ ಜಿಲ್ಲಾ ಪೋಲೀಸರ ಸೂಚನೆ ಮೇರೆಗೆ ಅಥಣಿ-ಮಿರಜ್ ನಡುವಿನ ಬಸ್ ಸಂಚಾರವನ್ನ ಸ್ಥಗಿತಗೊಳಿಸಲಾಗಿದೆ. : -- - - –