ಗಡಿ ವಿವಾದ: ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕೆಂಬುದು ನಮ್ಮ ಒಲವು- ಮಹಾರಾಷ್ಟ್ರ ಸಿಎಂ ಏಕನಾಥ್ ಸಿಂಧೆ. ಮುಂಬೈ,ನವೆಂಬರ್,24,2022(..):ಬೆಳಗಾವಿ ಗಡಿಯಲ್ಲಿ ಮಹಾರಾಷ್ಟ್ರದಿಂದ ಪದೇ ಪದೇ ಖ್ಯಾತೆ ವಿಚಾರ ಸಂಬಂಧ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಮಹಾರಾಷ್ಟ್ರ ಮುಂದಾಗಿದೆ. ಈ ಕುರಿತು ಮಾತನಾಡಿರುವ ಮಹಾರಾಷ್ಟ್ರ ಸಿಎಂ ಏಕನಾಥ್ ಸಿಂಧೆ, ಗಡಿ ವಿವಾದ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕೆಂಬುದು ನಮ್ಮ ಒಲವು. ಗಡಿ ವಿವಾದ ಕುರಿತು ನಾವು ಈಗಾಗಲೇ ಸಭೆ ನಡೆಸಿದ್ದೇವೆ. ಸುಪ್ರೀಂ ಕೋರ್ಟ್ ನಲ್ಲಿ ಕಾನೂನು ಹೋರಾಟ ನಡೆಯುತ್ತಿದೆ. ಇದರ ಜೊತೆಗೆ ಈ ವಿಷಯ ಮಾತುಕತೆ ಮೂಲಕ ಬಗೆಹರಿಯಬೇಕು. ಇದು ಮಹಾರಾಷ್ಟ್ರ ಸರ್ಕಾರದ ನಿಲುವಾಗಿದೆ ಎಂದಿದ್ದಾರೆ. ಈಗಾಗಲೇ ಎರಡೂ ರಾಜ್ಯಗಳ ರಾಜ್ಯಪಾಲರ ಸಭೆಯಾಗಿದೆ. ಕೇಂದ್ರ ಸಹ ಸಕರಾತ್ಮಕ ನಿಲುವು ವ್ಯಕ್ತಪಡಿಸಿದೆ . ಹೀಗಾಗಿ ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವುದು ನಮ್ಮ ನಿಲುವಾಗಿದೆ ಎಂದು ಏಕನಾಥ್ ಸಿಂಧೆ ಹೇಳಿದ್ದಾರೆ. : –- – – - - .