ಲಂಚ ಸ್ವೀಕರಿಸುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ. ಮಡಿಕೇರಿ,ನವೆಂಬರ್,23,2022(..):ಮಡಿಕೇರಿಯಲ್ಲಿ ಲಂಚಸ್ವೀಕರಿಸುತ್ತಿದ್ದ ವೇಳೆ ಪ್ರದಮ ದರ್ಜೆ ಸಹಾಯಕಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಕೊಡಗು ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಎಫ್ ಡಿಎ ಲತಾ ಎಂಬುವವರು ಲೋಕಾಯುಕ್ತ ಬಲೆಗೆ ಬಿದ್ದವರು. ಸಬ್ಸಿಡಿ ಕಾರು ಮಂಜುರಾತಿಗೆ 10% ಲಂಚ ಕೇಳಿದ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಲತೀಫ್ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ಮಧ್ಯೆ ಲೋಕಾಯುಕ್ತ ಅಧಿಕಾರಿಗಳು ಇಂದು ದಾಳಿ ನಡೆಸಿದ್ದು ಲಂಚ ಪಡೆಯುವಾಗ ಎಫ್ ಡಿಎ ಲತಾ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. : - - – - .