ಪ್ರತಿ ಲೀಟರ್ ನಂದಿನಿ ಹಾಲು, ಮೊಸರಿನ ದರ 2 ರೂ. ಹೆಚ್ಚಳ. ಬೆಂಗಳೂರು,ನವೆಂಬರ್,23,2022(..):ನಾಳೆಯಿಂದಲೇ ಪ್ರತಿ ಲೀಟರ್ ನಂದಿನಿ ಹಾಲು, ಮೊಸರಿನ ದರ 2 ರೂ. ಹೆಚ್ಚಳವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಕೆಎಂಎಫ್ ನಿರ್ದೇಶಕರ ಜೊತೆ ಸಭೆ ಬಳಿಕ ಮಾತನಾಡಿ ಮಾಹಿತಿ ನೀಡಿದ ಬಾಲಚಂದ್ರ ಜಾರಕಿಹೊಳಿ, ಹಾಲು ಮೊಸರಿನ ದರ 2 ರೂಪಾಯಿ ಹೆಚ್ಚಳವಾಗಲಿದೆ. ನಂದಿನಿ ಹಾಲಿನ ದರ ಏರಿಕೆ ನಾಳೆಯಿಂದಲೇ ಜಾರಿಗೆ ಬರಲಿದೆ. ಹೆಚ್ಚುವರಿ ಹಣವನ್ನ ಹಾಲು ಉತ್ಪಾದಕರಿಗೆ ನೀಡಲಾಗುವುದು ಎಂದರು. : – – – 2 –