ಬಿಬಿಎಂಪಿ ಚುನಾವಣೆ ನಡೆಸಲು ಹಿಂದೇಟು: ಮತ್ತೆ 3 ತಿಂಗಳು ಕಾಲಾವಕಾಶ ಕೇಳಿದ ಸರ್ಕಾರ. ಬೆಂಗಳೂರು,ನವೆಂಬರ್,23,2022(..):ಬಿಬಿಎಂಪಿ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಹಿಂದೇಟು ಹಾಕುತ್ತಿದ್ದು ಈ ಮಧ್ಯೆ ಮತ್ತೆ 3 ತಿಂಗಳು ಕಾಲಾವಕಾಶ ಕೇಳಿದೆ. ಈ ಸಂಬಂಧ ಹೈಕೋರ್ಟ್ ಗೆ ನಗರಾಭಿವೃದ್ಧಿ ಇಲಾಖೆ ಅರ್ಜಿ ಸಲ್ಲಿಸಿದ್ದು ಬಿಬಿಎಂಪಿ ಚುನಾವಣೆ ನಡೆಸಲು 3 ತಿಂಗಳು ಕಾಲಾವಕಾಶ ನೀಡುವಂತೆ ಮನವಿ ಮಾಡಿದೆ. ನ್ಯಾ. ಭಕ್ತವತ್ಸಲ ಸಮಿತಿಯಿಂದ ಮಾಹಿತಿ ಕೇಳಲಾಗಿದೆ. ಹಿಂದುಳಿದ ವರ್ಗಕ್ಕೆ ಮೀಸಲಾತಿ ಸಂಬಂಧ, ರಾಜಕೀಯ ಹಿಂದುಳಿದಿರುವಿಕೆ ಬಗ್ಗೆಯೋ ಮಾಹಿತಿ ಕೇಳಲಾಗಿದೆ . ಮಾಹಿತಿ ನೀಡಲು ಭಕ್ತ ವತ್ಸಲ ಸಮಿತಿ ಕಾಲಾವಕಾಶ ಕೇಳಿದೆ. ಹೀಗಾಗಿ 3 ತಿಂಗಳು ಸಮಯ ನೀಡುವಂತೆ ರಾಜ್ಯ ಸರ್ಕಾರ ಹೈಕೋರ್ಟ್ ಗೆ ಮನವಿ ಮಾಡಿದೆ ಎನ್ನಲಾಗಿದೆ. ನವೆಂಬರ್ 30ರೊಳಗೆ ಮೀಸಲಾತಿ ಪಟ್ಟಿ ಪ್ರಕಟಿಸಲು ಹೈಕೋರ್ಟ್ ಆದೇಶಿಸಿತ್ತು. : – –- – - 3 .