ಬಿಜೆಪಿ ಪರವಾಗಿ ಸಾಫ್ಟ್ ಕಾರ್ನರ್ ತೋರಿಲ್ಲ: ಲವ್ ಜಿಹಾದ್ ನಿಯಂತ್ರಣಕ್ಕೆ ಕಾಯ್ದೆ ರೂಪಿಸಿ- ಪ್ರಮೋದ್ ಮುತಾಲಿಕ್ ಆಗ್ರಹ. ಮೈಸೂರು,ನವೆಂಬರ್,23,2022(..):ನಾನು ಎಂದೂ ಬಿಜೆಪಿ ಪರವಾಗಿ ಮಾತನಾಡಿಲ್ಲ. ಬಿಜೆಪಿ ಪರವಾಗಿ ಸಾಫ್ಟ್ ಕಾರ್ನರ್ ತೋರಿಲ್ಲ ಎಂದು ಶ್ರಿರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು. ಮೈಸೂರಿನಲ್ಲಿ ಇಂದು ಮಾತನಾಡಿದ ಪ್ರಮೋದ್ ಮುತಾಲಿಕ್, ಬಿಜೆಪಿಗೆ ಸಿದ್ದರಾಮಯ್ಯ ಅವರಿಗಿಂತ ಹೆಚ್ಚು ಬೈದವನು ನಾನು. ಬಿಜೆಪಿಯನ್ನ ಮೊದಲಿನಿಂದಲೂ ಟೀಕಿಸುತ್ತಾ ಬಂದಿದ್ದೇನೆ. ಕೇವಲ ಹಿಂದುತ್ವದ ವಿಚಾರವಾಗಿ ಗಟ್ಟಿ ಧ್ವನಿಯಲ್ಲಿ ಮಾತಾಡುತ್ತಿದ್ದೀನಿ ಎಂದರು. ಲವ್ ಜಿಹಾದ್ ನಿಯಂತ್ರಣಕ್ಕೆ ಪ್ರತ್ಯೇಕ ಕಾಯಿದೆ ರೂಪಿಸಬೇಕು. ಬಿಜೆಪಿ ಸರಕಾರದ ಮುಖ್ಯಮಂತ್ರಿಗೆ ವಿಶೇಷವಾಗಿ ಮನವಿ ಮಾಡುತ್ತಿದ್ದೇನೆ ರಾಜ್ಯದಲ್ಲಿ ಲವ್ ಜಿಹಾದ್ ದಿನೇ ದಿನೇ ಹೆಚ್ಚಾಗ್ತಿದೆ. ಲವ್ ಜಿಹಾದ್ ವಿರುದ್ದ ಮೊದಲು ದ್ನನಿ ಎತ್ತಿದವನೇ ನಾನು 3 ಸಾವಿರ ಹೆಣ್ಣುಮಕ್ಕಳನ್ನ ಲವ್ ಜಿಹಾದ್ ನಿಂದ ನಾವು ಪಾರು ಮಾಡಿದ್ದೇವೆ. ಹಿಂದೂ ಹೆಣ್ಣು ಮಕ್ಕಳು ಪ್ರೀತಿ ಮಾಡಬೇಕಾದರೆ ಅಬ್ದುಲ್ಲಾ-ಅಶೋಕ್ ವ್ಯತ್ಯಾಸ ಅರಿತು ಪ್ರೀತಿ ಮಾಡಬೇಕು. ಇಲ್ಲವಾದರೆ ದೆಹಲಿಯಲ್ಲಿ ನಡೆದಂತೆ ಹಿಂದೂ ಹೆಣ್ಣು ಮಕ್ಕಳು ತುಂಡು ತುಂಡಾಗಿ ಬಲಿಯಾಗುತ್ತಾರೆ. ನಿಮ್ಮ ಜತೆಗೆ ಹಿಂದೂ ಧರ್ಮವನ್ನೂ ಬಲಿ ಕೊಡಬೇಡಿ. ಲವ್ ಜಿಹಾದ್ ನಿಯಂತ್ರಣವಾಗಬೇಕಾದರೆ ಪ್ರತ್ಯೇಕ ಕಾನೂನು ರೂಪಿಸಬೇಕು ಎಂದು ಪ್ರಮೋದ್ ಮುತಾಲಿಕ್ ಹೇಳಿದರು. : - – -- … “ ’ ”: . , 23, 2022 (..): “ . ’ ,” . , , “ . . .”“ . , . . 3,000 . . , . . ,” .: / /