ವೋಟರ್ ಐಡಿ ಪರಿಷ್ಕರಣೆ ಅಕ್ರಮ ಪ್ರಕರಣ: ಮೂವರು ಆರ್ ಓಗಳು ಸಸ್ಪೆಂಡ್. ಬೆಂಗಳೂರು, ನವೆಂಬರ್,21,2022(..):ಬೆಂಗಳೂರಿನಲ್ಲಿ ವೋಟರ್​ ಐಡಿ ಪರಿಷ್ಕರಣೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿ ಬಿಬಿಎಂಪಿ ಮುಖ್ಯ ಆಯುಕ್ತರ ಕೈಗೆ ಸೇರಿದ್ದು, ಈ ಹಗರಣದಲ್ಲಿ ಬಿಬಿಎಂಪಿ ಅಧಿಕಾರಿಗಳೇ ಶಾಮೀಲಾಗಿರುವುದು ಬಹಿರಂಗವಾಗಿದೆ. ತನಿಖಾ ವರದಿಯಲ್ಲಿ ಬಿಬಿಎಂಪಿ ಅಧಿಕಾರಿಗಳು ಚಿಲುಮೆ ಸಂಸ್ಥೆಗೆ ಬಿಎಲ್​ಒ ಎಂದು ಐಡಿ ಕಾರ್ಡ್ ಹಂಚಿಕೆ‌ ಮಾಡಿರುವುದು ತಿಳಿದುಬಂದಿದೆ. ಈ ಹಿನ್ನೆಲೆ ಮಹಾದೇವಪುರ ವಲಯದ ಆರ್​ಓ ಚಂದ್ರಶೇಖರ್, ಚಿಕ್ಕಪೇಟೆ ವಲಯದ ಆರ್​ಓ ಭೀಮಾಶಂಕರ್, ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಆರ್​ಓ ಸುಹೇಲ್ ಅಹ್ಮದ್​​ ರನ್ನು ಅಮಾನತು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಕರಣ ಕುರಿತು ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್​ ಗಿರಿನಾಥ್ , 4 ತಂಡಗಳ ತನಿಖಾ ವರದಿ ಬಿಬಿಎಂಪಿ ಕೈಸೇರಿದೆ. ಈ ವರದಿಗಳನ್ನು ಆಧರಿಸಿ ಬಿಬಿಎಂಪಿ ಅಂತಿಮ ವರದಿ ಸಿದ್ಧಪಡಿಸುತ್ತದೆ ಎಂದು ಹೇಳಿದ್ದಾರೆ. : –- –- – .