ಪೋಕ್ಸೋ ಪ್ರಕರಣ: ಮುರುಘಾಶ್ರೀ ಸೇರಿ ಇತರೇ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ. ಚಿತ್ರದುರ್ಗ,ನವೆಂಬರ್,21,2022(..):ಅಪ್ರಾಪ್ತ ವಿದ್ಯಾರ್ಥಿನೀಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೋಕ್ಸೋ ಪ್ರಕರಣದಲ್ಲಿ ಜೈಲುಪಾಲಾಗಿರುವ ಚಿತ್ರದುರ್ಗದ ಮುರುಘಾಶ್ರೀ ನ್ಯಾಯಾಂಗ ಬಂಧನದ ಅವಧಿ ಮತ್ತೆ ವಿಸ್ತರಣೆಯಾಗಿದೆ. ಮುರುಘಾಶ್ರೀ ಸೇರಿದಂತೆ ಇತರೆ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ನವೆಂಬರ್ 25ರವರೆಗೆ ವಿಸ್ತರಿಸಿ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಆರೋಪಿಗಳ ನ್ಯಾಯಾಂಗ ಬಂಧನ ಇಂದಿಗೆ ಅಂತ್ಯವಾಗಿತ್ತು. ಇಂದು(ನವೆಂಬರ್ 21) ವಿಡಿಯೋ ಕಾನ್ಫರೆನ್ಸ್​ ಮೂಲಕ ಪೊಲೀಸರು ಆರೋಪಿಗಳನ್ನು ಕೋರ್ಟ್ ಮುಂದೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಕೋರ್ಟ್ ಎ1 ಆರೋಪಿ ಮುರುಘಾ ಶ್ರೀ, ಎ2 ವಾರ್ಡನ್ ರಶ್ಮಿ, ಎ3 ಮಠದ ಮ್ಯಾನೇಜರ್ ಪರಮಶಿವಯ್ಯಗೆ ನವೆಂಬರ್ 25ರ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. : - - – –