ಬೆಂಗಳೂರು-ಮೈಸೂರು ಹೆದ್ದಾರಿ ವ್ಯಾಪ್ತಿ ರಸ್ತೆಗಳ ದುರಸ್ತಿಗೊಳಿಸಲು ಸಂಸದ ಪ್ರತಾಪ್ ಸಿಂಹಗೆ ಗಡುವು ನೀಡಿದ ಶಾಸಕ ಸಿ.ಎಸ್ ಪುಟ್ಟರಾಜು. ಮಂಡ್ಯ,ನವೆಂಬರ್,19,2022(..):ಬೆಂಗಳೂರು-ಮೈಸೂರು ಹೆದ್ದಾರಿ ವ್ಯಾಪ್ತಿಯ ರಸ್ತೆಗಳನ್ನು ದುರಸ್ತಿಗೊಳಿಸುವಂತೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹಗೆ ಮೇಲುಕೋಟೆ ಜೆಡಿಎಸ್ ಶಾಸಕ ಸಿ.ಎಸ್ ಪುಟ್ಟರಾಜು ಗಡುವು ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಶಾಸಕ ಸಿ.ಎಸ್ ಪುಟ್ಟರಾಜು, ಮೈಸೂರು- ಬೆಂಗಳೂರು ಹೆದ್ದಾರಿ ವ್ಯಾಪ್ತಿಯಲ್ಲಿನ ರಸ್ತೆಗಳು ಗುಂಡಿ ಬಿದ್ದು ಹಾಳಾಗಿವೆ. ರಸ್ತೆಗಳನ್ನ ದುರಸ್ತಿಗೊಳಿಸಬೇಕು. ಇಲ್ಲದಿದ್ದರೇ ಸಂಸದರ ಮನೆ ಮುಂದೆ ಪ್ರತಿಭಟನೆಗೆ ಕೂರುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. : - – – - –