ಕೋಲಾರದಲ್ಲಿ ಸಿದ್ಧರಾಮಯ್ಯ ಸ್ಪರ್ಧೆ ವಿಚಾರ: ಕೆಲವರ ಬುಡ ಅಲುಗಾಡುತ್ತಿದೆ ಎಂದ ಸಚಿವ ಡಾ.ಕೆ.ಸುಧಾಕರ್. ತುಮಕೂರು,ನವೆಂಬರ್,16,2022(..):ಮುಂದಿನ ವಿಧಾನಸಭಾ ಚುನಾವಣೆಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆ ಎಂಬ ವಿಚಾರ ಕಗ್ಗಂಟಾಗಿದ್ದು ಈ ನಡುವೆ ಕೋಲಾರದಿಂದ ಸ್ಪರ್ಧಿಸಬಹುದು ಎಂಬ ಸುಳಿವು ಸಿಕ್ಕಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕೋಲಾರದಲ್ಲಿ ಕೆಲವರ ಬುಡ ಅಲುಗಾಡುತ್ತಿದೆ. ನಾಯಕರ ಬುಡ ಸರಿ ಮಾಡಲು ಸಿದ್ಧರಾಮಯ್ಯ ಮೂಲಕ ಪ್ರಯತ್ನ ಮಾಡಲಾಗುತ್ತಿದೆ. ಅದಕ್ಕೆ ಸಿದ್ದರಾಮಯ್ಯರನ್ನ ಕೋಲಾರಕ್ಕೆ ಕರೆಸಿಕೊಂಡಿದ್ದಾರೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೆ ಪರೋಕ್ಷ ಟಾಂಗ್ ನೀಡಿದರು. ಕೋಲಾರದಲ್ಲಿ ಸಿದ್ದರಾಮಯ್ಯ ಬಲಿಕೊಡುತ್ತಿದ್ದಾರೆ. ಮಾಜಿ ಸಿಎಂ ಎಲ್ಲಿಂದ ಬೇಕಾದರೂ ಸ್ಪರ್ಧಿಸಬಹುದು ಎಂದು ಸುಧಾಕರ್ ಹೇಳಿದರು. : - – - -. .