ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷಾ ಅಕ್ರಮ ಪ್ರಕರಣ: ಮತ್ತೆ ನಾಲ್ವರ ಬಂಧನ. ಬೆಳಗಾವಿ, ನವೆಂಬರ್,16,2022(..):ಕೆಪಿಟಿಸಿಎಲ್ ಕಿರಿಯ ಸಹಾಯಕ ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನ ಬಂಧಿಸಲಾಗಿದೆ. ಮಂಜುನಾಥ್ ರಾಮಪ್ಪ, ಪುಂಡಲಿಕ ಫಕೀರಪ್ಪ, ಬನಜ , ಮಹದೇವ ದಾಸನಾಳ ಬಂಧಿತ ಆರೋಪಿಗಳು. ಪರಿಕ್ಷೆ ಅಕ್ರಮದಲ್ಲಿ ಬಂಧಿತರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. ಖಚಿತ ಮಾಹಿತಿ ಮೇರೆಗೆ ಗೋಕಾಕ್ ಮತ್ತು ಶಹರ ಠಾಣಾ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನ ಬಂಧಿಸಿದ್ದಾರೆ. ಬಂಧಿತರು ಎಲೆಕ್ಟ್ರಾನಿಕ್ ಡಿವೈಸ್, ಮೈಕ್ರೋಚಿಪ್ ಬಳಸಿ ಪರೀಕ್ಷೆ ಬರೆದಿದ್ದರು ಎನ್ನಲಾಗಿದೆ. : - - - - –