ಪ್ರಧಾನಿ ಮೋದಿ ಬೆಂಗಳೂರು ಭೇಟಿ ಟೀಕಿಸಿದ್ದ ಸಿದ್ಧರಾಮಯ್ಯಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು. ಧಾರವಾಡ,ನವೆಂಬರ್,12,2022(..):ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿಯನ್ನ ಟೀಕಿಸಿದ್ಧ ವಿಪಕ್ಷ ನಾಯಕ ಸಿದ್ಧರಾಮಯ್ಯಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕೇಂಧ್ರ ಸಚಿವ ಪ್ರಹ್ಲಾದ್ ಜೋಶಿ, ಸುಳ್ಳುಸುದ್ಧಿಯ ಸಿದ‍್ಧರಾಮಯ್ಯನವರೇ ಕೆಂಪೇಗೌಡರನ್ನು ಆದರ್ಶವಾಗಿಟ್ಟುಕೊಂಡು ನಾಡಿನ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಮಾನ್ಯ ಪ್ರಧಾನಮಂತ್ರಿ ನರೇಂಧ್ರ ಮೋದಿಕೈಯಿಂದಲೇ ಇಂದು ಸಾವಿರಾರು ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗಳನ್ನು ನಮ್ಮ ರಾಜ್ಯದಲ್ಲಿ ಉದ್ಘಾಟನೆ ಮಾಡಿದ್ದೇವೆ. ಅಧಿಕಾರ ಕೈಯಲಿಲ್ಲ ಎಂಬ ಹತಾಶೆಯಿಂದ ಪ್ರಶ್ನಿಸುವ ಸಲುವಾಗಿ ರಾಜ್ಯದ ಜನತೆಗೆ ಸುಳ್ಳು ಸುದ್ದಿ ಮುಟ್ಟಿಸಬೇಡಿ ಯಾಕೆಂದರೆ ನೀವು ಕೂಡ ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಎಂದು ಟಾಂಗ್ ನೀಡಿದ್ದಾರೆ. : - – – -