ಪೋಷಕರು ಬೈದಿದ್ದಕ್ಕೆ ಮನನೊಂದು 7ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು. ಬೆಂಗಳೂರು,ನವೆಂಬರ್,12,2022(..):ಇತ್ತೀಚಿನ ದಿನಗಳಲ್ಲಿ ಸಣ್ಣಪುಟ್ಟ ವಿಚಾರಗಳಿಗೆ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಈ ಮಧ್ಯೆ ಪೋಷಕರು ಬೈದಿದ್ದಕ್ಕೆ 7 ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 7 ನೇ ತರಗತಿ ವಿದ್ಯಾರ್ಥಿ ಸಾಯಿಕುಮಾರ್(13) ನೇಣಿಗೆ ಶರಣಾದ ಬಾಲಕ. ನಿನ್ನೆ ಸಂಜೆ 7 ಗಂಟೆಗೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮನೆಯಲ್ಲಿ ಕೆಲಸ ಮಾಡುತ್ತಿಲ್ಲ ಎಂದು ಪೋಷಕರು ಬೈದಿದ್ದಕ್ಕೆ ಮನೆಯ ಟೆರೇಸ್ ಮೇಲೆ ಸಾಯಿಕುಮಾರ್ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. : - - -