ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರ ಬಿಡುಗಡೆಗೆ ಅಸಮಾಧಾನ. ನವದೆಹಲಿ,ನವೆಂಬರ್,11,2022(..):ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರ ಬಿಡುಗಡೆಗೆ ಸುಪ್ರೀಂಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಈ ಬಗ್ಗೆ ಕಾಂಗ್ರೆಸ್ ಅಸಮಾಧಾನ ಹೊರ ಹಾಕಿದೆ. ಈ ಕುರಿತು ಮಾತನಾಡಿರುವ ಕಾಂಗ್ರೆಸ್ ನಾಯಕ ಜಯರಾಮ್ ರಮೇಶ್, ಸುಪ್ರೀಂಕೋರ್ಟ್ ತೀರ್ಪು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ . ಭಾರತದ ಸ್ಪೂರ್ತಿಯಂತೆ ನಡೆದುಕೊಳ್ಳದಿರುವುದು ದುರಾದೃಷ್ಟ. ಕೊಲೆ ಪ್ರಕರಣದ ಅಪರಾಧಿಗಳನ್ನ ಬಿಡುಗಡೆ ಮಾಡಿರುವುದು ತಪ್ಪು ಎಂದು ಆಕ್ರೋಶ ವ್ಯಕ್ತಪಡಿಸಿದರು. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಮತ್ತು ಆರ್.ಪಿ.ರವಿಚಂದ್ರನ್ ಸೇರಿದಂತೆ ಆರು ಆರೋಪಿಗಳನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು. : -- - -