ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರ ಬಿಡುಗಡೆಗೆ ಸುಪ್ರೀಂಕೋರ್ಟ್ ಆದೇಶ. ನವದೆಹಲಿ,ನವೆಂಬರ್,11,2022(..):ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಮತ್ತು ಆರ್.ಪಿ.ರವಿಚಂದ್ರನ್ ಸೇರಿದಂತೆ ಆರು ಆರೋಪಿಗಳನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ನಳಿನಿ ಶ್ರೀ ಹರನ್ ಅಲ್ಲದೇ, ಶ್ರೀಹರನ್, ಸಂತನ್, ಮುರುಗನ್, ರಾಬರ್ಟ್ ಪಾಯಸ್ ಮತ್ತು ರವಿಚಂದ್ರನ್ ಜೈಲಿನಲ್ಲಿದ್ದಾರೆ. ಈ ಹಿಂದೆ ತಮಿಳುನಾಡು ಸರ್ಕಾರ ಕೂಡಾ ರಾಜೀವ್ ಗಾಂಧಿ ಹಂತಕರ ಬಿಡುಗಡೆಗೆ ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು. ಇದನ್ನು ಸುಪ್ರೀಂಕೋರ್ಟ್ ಪರಿಗಣಿಸಿದ್ದು, ಅವರ ಬಿಡುಗಡೆಗೆ ಆದೇಶಿಸಿದೆ. ಮೇ 21, 1991ಕಲ್ಲಿ ತಮಿಳುನಾಡಿನ ಪೆರಂಬೂರಿನಲ್ಲಿ ಎಲ್ ಟಿಟಿಐ ಗುಂಪಿನ ಮಹಿಳಾ ಆತ್ಯಾಹುತಿ ಬಾಂಬರ್ ಗಳಿಂದ ರಾಜೀವ್ ಗಾಂಧಿ ಅವರ ಹತ್ಯೆಯಾಗಿತ್ತು. : - – – - - . … , 11, 2022 (..): ’ . .. , . , , , , ., ’ . . , 21, 1991.: / / / /