ಸಿಜೆಐ ಆಗಿ ಡಿವೈ ಚಂದ್ರಚೂಡ್ ನೇಮಕ ಪ್ರಶ್ನಿಸಿ ಪಿಐಎಲ್ ಸಲ್ಲಿಸಿದ್ಧ ವ್ಯಕ್ತಿಗೆ 1 ಲಕ್ಷ ರೂ. ದಂಡ ವಿಧಿಸಿದ ಕೋರ್ಟ್. ನವದೆಹಲಿ,ನವೆಂಬರ್,11,2022(..):ಸುಪ್ರೀಂಕೋರ್ಟ್ ನ ಸಿಜೆಐ ಆಗಿ ಡಿವೈ ಚಂದ್ರ ಚೂಡ್ ನೇಮಕ ಪ್ರಶ್ನಿಸಿ ಪಿಐಎಲ್ ಸಲ್ಲಿಸಿದ್ಧ ವ್ಯಕ್ತಿಗೆ ದೆಹಲಿ ಹೈಕೋರ್ಟ್ 1 ಲಕ್ಷ ರೂ. ದಂಡ ವಿಧಿಸಿದೆ. ಸಿಜೆಐ ಆಗಿ ಡಿವೈ ಚಂದ್ರಚೂಡ್ ನೇಮಕ ಪ್ರಶ್ನಿಸಿ ಸಂಜೀವ್ ಕುಮಾರ್ ತಿವಾರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಆದರೆ ಈ ಅರ್ಜಿ ತಿರಸ್ಕರಿಸಿದ ಕೋರ್ಟ್ ಅರ್ಜಿದಾರ ಸಂಜೀವ್ ಕುಮಾರ್ ತಿವಾರಿಗೆ 1 ಲಕ್ಷ ದಂಡ ವಿಧಿಸಿದೆ. ಪಬ್ಲಿಸಿಟಿ ಪಡೆಯಲು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಅರ್ಜಿಯಲ್ಲಿ ಯಾವುದೇ ಸೂಕ್ತ ವಿಚಾರ ಇಲ್ಲ ಎಂದು ದೆಹಲಿ ಹೈಕೋರ್ಟ್ ತಿಳಿಸಿದೆ. : - –- – --1