ಪರಶುರಾಮ್ ಸಾವು ಕೇಸ್: ಶಾಸಕ ಮತ್ತು ಪುತ್ರನ ವಿರುದ್ದ ದಾಖಲು ಯಾದಗಿರಿ,ಆಗಸ್ಟ್,3,2024 (..)ಪಿಎಸ್‌ ಐ ಆಗಿದ್ದ ಪರಶುರಾಮ್ ಅವರ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ 17 ಗಂಟೆಗಳ ಬಳಿಕ ಯಾದಗಿರಿ ನಗರ ಠಾಣೆಯಲ್ಲಿ ಯಾದಗಿರಿ ಶಾಸಕ ಚೆನ್ನರೆಡ್ಡಿ ಪಾಟೀಲ್ ಹಾಗೂ ಅವರ ಪುತ್ರ ಪಂಪನಗೌಡ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಪಿಎಸ್‌ ಐ ಪರಶುರಾಮ್ ಪತ್ನಿ ಶ್ವೇತಾ ಅವರ ದೂರು ಆಧರಿಸಿ ಇದೀಗ ಯಾದಗಿರಿ ಪೊಲೀಸ್ ಠಾಣೆಯಲ್ಲಿ ಜಾತಿನಿಂದನೆ ಆರೋಪದ ಅಡಿ ಶಾಸಕ ಚೆನ್ನರೆಡ್ಡಿ ಪಾಟೀಲ್ ಹಾಗೂ ಅವರ ಪುತ್ರ ಪಂಪನಗೌಡ ವಿರುದ್ಧ ಪ್ರಕರಣ ದಾಖಲಾಗಿದೆ. A1 ಆರೋಪಿಯಾಗಿ ಶಾಸಕ ಚನ್ನಾರೆಡ್ಡಿ ಪಾಟೀಲ್, ಹಾಗೂ 2 ಆರೋಪಿಯಾಗಿ ಪುತ್ರ ಪಂಪನಗೌಡ ವಿರುದ್ಧ ಎಫ್ ಐಆರ್ ದಾಖಲಾಗಿದೆ. ವರ್ಗಾವಣೆಗೆ ಸಂಬಂಧಿಸಿದಂತೆ ಶಾಸಕ ಚೆನ್ನಾರೆಡ್ಡಿ ಲಕ್ಷಾಂತರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದರಿಂದ ಪರಶುರಾಮ್ ಮಾನಸಿಕವಾಗಿ ನೊಂದಿದ್ದರು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. : , , , : ,