ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಕಿಕ್ ಬ್ಯಾಕ್ ಪಡೆದ ಆರೋಪ: ಲೋಕಾಯುಕ್ತಕ್ಕೆ ದೂರು. ಬೆಂಗಳೂರು,ನವೆಂಬರ್,2,2022(..):ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ವೇಳೆ ಚೆಕ್ ಮೂಲಕ ₹ 1.30 ಕೋಟಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಿದ್ಧ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಈ ಸಂಬಂಧ ಇಂದು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಸಿದ್ಧರಾಮಯ್ಯ ಸಿಎಂ ಆಗಿದ್ದ ವೇಳೆ ಸಾಲದ ರೂಪದಲ್ಲಿ 1.3 ಕೋಟಿ ರೂ ಹಣ ಪಡೆದು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದರು. ಎಲ್.ವಿವೇಕಾನಂದ ಎನ್ನುವವರಿಂದ ಸಿದ್ದರಾಮಯ್ಯ ₹ 1.30 ಕೋಟಿ ಲಂಚ ಪಡೆದಿದ್ದರು. ಲಂಚದ ಹಣ ಸಂದಾಯವಾದ ನಂತರವೇ ಅವರು 2014ರಲ್ಲಿ ಟರ್ಫ್​ ಕ್ಲಬ್​ ಉಸ್ತುವಾರಿ ಹುದ್ದೆಗೆ ವಿವೇಕಾನಂದ ಅವರನ್ನು 3 ವರ್ಷಗಳ ಅವಧಿಗೆ ನೇಮಿಸಿದ್ದರು. ವಿವೇಕಾನಂದ ಅವರಿಂದ ತಾವು ಸಾಲ ಪಡೆದಿರುವುದಾಗಿ ಸಿದ್ದರಾಮಯ್ಯ ಚುನಾವಣಾ ಆಯೋಗಕ್ಕೆ ಮಾಹಿತಿ ಕೊಟ್ಟಿದ್ದರು. ಆದರೆ ಇದು ಸಾಲವಾಗಿರಲಿಲ್ಲ. ಕೇಂದ್ರ ಗೃಹ ಇಲಾಖೆ ರೂಪಿಸಿರುವ ನಿಯಮಗಳ ಪ್ರಕಾರ ಯಾರಿಗಾದರೂ ಯಾವುದಾದರೂ ಹುದ್ದೆ ನೀಡುವುದಕ್ಕೆ ಪ್ರತಿಯಾಗಿ ಉಡುಗೊರೆ ಅಥವಾ ಚೆಕ್​ ಪಡೆಯುವಂತಿಲ್ಲ ಎಂದು ಎನ್ .ಆರ್ ರಮೇಶ್ ಆರೋಪಿಸಿದ್ದಾರೆ. ಈ ಸಂಬಂಧ ಇಂದು ಸಿದ್ಧರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ಬಿಜೆಪಿ ಮುಖಂಡ ಎನ್. ಆರ್ ರಮೇಶ್ ದೂರು ಸಲ್ಲಿಕೆ ಮಾಡಿದ್ದಾರೆ. : – - - –- – . … : , 2, 2022 (..): .. . 1.3 .“ . 1.3 . . 2014 ,” .“ . . ,” .. .: ../ / / /