ಬಿಜೆಪಿ ಶಾಸಕ ತಿಪ್ಪಾರೆಡ್ಡಿಗೆ ಹನಿಟ್ರ್ಯಾಪ್ ಮಾಡಲು ಯತ್ನ.. ಚಿತ್ರದುರ್ಗ,ನವೆಂಬರ್,2,2022(..):ಬಿಜೆಪ ಶಾಸಕ ತಿಪ್ಪಾರೆಡ್ಡಿ ಅವರಿಗೆ ಅಪರಿಚಿತ ಯುವತಿ ವಾಟ್ಸಪ್ ವಿಡಿಯೋ ಕಾಲ್ ಮಾಡಿ ಹನಿಟ್ರ್ಯಾಪ್ ಗೆ ಯತ್ನಿಸಿರುವ ಘಟನೆ ನಡೆದಿದೆ. ಈ ಸಂಬಂಧ ಶಾಸಕ ತಿಪ್ಪಾರೆಡ್ಡಿ ಅವರು ಚಿತ್ರದುರ್ಗ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅಕ್ಟೋಬರ್ 31 ರಂದು ಯುವತಿಯೋರ್ವಳು ಶಾಸಕ ತಿಪ್ಪಾರಡ್ಡಿಗೆ ಬೆತ್ತಲೆಯಾಗಿ ಕಾಲ್ ಮಾಡಿದ್ದು, ನಂತರ ವಾಟ್ಸಪ್ ಗೆ ಅಶ್ಲೀಲ ವಿಡಿಯೋ ಕಳುಹಿಸಿದ್ದಾಳೆ ಎನ್ನಲಾಗಿದೆ. ಈ ವೇಳೆ ಶಾಸಕ ತಿಪ್ಪರೆಡ್ಡಿ ಅವರು ತಕ್ಷಣ ಮೊಬೈಲ್ ಅನ್ನ ಪಕ್ಕಕ್ಕೆ ಇಟ್ಟಿರುವುದಾಗಿ ತಿಳಿಸಿದ್ದಾರೆ. ನಂತರ ವಿಡಿಯೋ ಕಾಲ್ ಮಾಡಿದ್ದ ನಂಬರ್ ಅನ್ನ ತಿಪ್ಪಾರೆಡ್ಡಿ ಅವರು ಬ್ಲಾಕ್ ಮಾಡಿದ್ದಾಗಿ ತಿಳಿಸಿದ್ದಾರೆ. ಈ ಕುರಿತು ಶಾಸಕ ತಿಪ್ಪಾರೆಡ್ಡಿ ಚಿತ್ರದುರ್ಗ ಸೈಬರ್ ಠಾಣೆಗೆ ದೂರು ನೀಡಿದ್ದಾರೆ. : – –- - .