ಬೆಂಗಳೂರಿನಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಚಾಲನೆ. ಬೆಂಗಳೂರು,ನವೆಂಬರ್,2,2022(..):ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ದೀಪ ಬೆಳಗುವ ಮೂಲಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಚಾಲನೆ ನೀಡಿದರು. ಈ ವೇಳೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಕೇಂದ್ರ ಸಚಿವಾರದ ಪ್ರಹ್ಲಾದ್ ಜೋಶಿ ನಿರ್ಮಲಾ ಸೀತಾರಾಮನ್ ಪೀಯೂಷ್ ಗೋಯಲ್, ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಉಪಸ್ಥಿತರಿದ್ದರು. ಸರ್ಕಾರವು 5 ಲಕ್ಷ ಕೋಟಿಗೂ ಹೆಚ್ಚು ಹೂಡಿಕೆ ನಿರೀಕ್ಷೆಯಲ್ಲಿದ್ದು, ದೇಶ ವಿದೇಶಗಳ ಖ್ಯಾತ ಉದ್ಯಮಿಗಳು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸಮಾವೇಶ ಉದ್ಧೇಶಿಸಿ ವರ್ಚೂವಲ್ ಮೂಲಕ ಪ್ರಧಾನಿ ಮೋದಿ ಮಾತನಾಡುತ್ತಿದ್ದಾರೆ. : - - - – .