ಇಂದು ವಡೋದರಾದಲ್ಲಿ ಸಿ-295(-295) ಸಾರಿಗೆ ವಿಮಾನ ತಯಾರಿಕಾ ಘಟಕಕ್ಕೆ ಮೋದಿ ಶಂಕುಸ್ಥಾಪನೆ ಬೆಂಗಳೂರು, ಅಕ್ಟೋಬರ್ 30, 2022 (..):ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ವಡೋದರಾದಲ್ಲಿ ಸಿ-295(-295) ಸಾರಿಗೆ ವಿಮಾನ ತಯಾರಿಕಾ ಘಟಕಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ. ವಡೋದರಾದಲ್ಲಿ ಭಾರತೀಯ ವಾಯುಪಡೆಗೆ (ಐಎಎಫ್) -295 ಸಾರಿಗೆ ವಿಮಾನವನ್ನು ತಯಾರಿಸಲಿದೆ ಎಂದು ರಕ್ಷಣಾ ಸಚಿವಾಲಯ ಗುರುವಾರ ಪ್ರಕಟಿಸಿದೆ. ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ( ), ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಎಂ ಸಿಂಧಿಯಾ ಮತ್ತು ಗುಜರಾತ್ ಸಿಎಂ ಭೂಪೇಂದ್ರಭಾಯಿ ಪಟೇಲ್ ಪಾಲ್ಗೊಳ್ಳಲಿದ್ದಾರೆ. ಯುರೋಪಿಯನ್ ರಕ್ಷಣಾ ದೈತ್ಯ ಏರ್‌ಬಸ್ ಮತ್ತು ಟಾಟಾ ಸಮೂಹವನ್ನು ಒಳಗೊಂಡಿರುವ ಒಕ್ಕೂಟವು ವಡೋದರಾದಲ್ಲಿ ಭಾರತೀಯ ವಾಯುಪಡೆಗೆ (ಐಎಎಫ್) -295 ಸಾರಿಗೆ ವಿಮಾನವನ್ನು ತಯಾರಿಸಲಿದೆ.