ವಿಧಾನಸಭಾ ಚುನಾವಣೆಯಲ್ಲಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕಣಕ್ಕೆ ಬೆಂಗಳೂರು, ಅಕ್ಟೋಬರ್ 30, 2022 (..):ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕಣಕ್ಕಿಳಿಯಲಿದ್ಧಾರೆ. ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಹಲವು ಕ್ಷೇತ್ರಗಳ ಅಭಿಮಾನಿಗಳು ಮನವಿ ಮಾಡುತ್ತಿದ್ದು, ಡಿಸೆಂಬರ್ ಮೊದಲ ವಾರದ ಹೊತ್ತಿಗೆ ಯಾವ ಕ್ಷೇತ್ರ ಎಂಬುದನ್ನು ಬಹಿರಂಗಪಡಿಸುತ್ತೇನೆ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಈ ಮೂಲಕ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕಣಕ್ಕಿಳಿಯುವುದು ಖಚಿತವಾಗಿದೆ. ಮೂಲಗಳ ಪ್ರಕಾರ ದಕ್ಷಿಣ ಕನ್ನಡ ಅಥವಾ ಉಡುಪಿ ಜಿಲ್ಲೆಯ ಯಾವುದಾದರು ಒಂದು ಕ್ಷೇತ್ರದಿಂದ ಪ್ರಮೋದ್ ಮುತಾಲಿಕ್ ಕಣಕ್ಕಿಳಿಯಲಿದ್ದಾರೆ ಎನ್ನಲಾಗುತ್ತಿದೆ.