ಕಾಂಗ್ರೆಸ್‌ ವಿರುದ್ಧದ ಪಾದಯಾತ್ರೆಗೂ ಮುನ್ನ ಶಕ್ತಿ ದೇವತೆ ಮೊರೆ ಹೋದ ವಿಜಯೇಂದ್ರ. .. ಮೈಸೂರು, ಆ.03,2024: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಹಿಂದ ಹೆಸರು ಹೇಳಿ ಅಧಿಕಾರ ಹಿಡಿದಿದೆ. ಆದರೆ ಅಹಿಂದ ವರ್ಗಕ್ಕೆ ದ್ರೋಹ ಬಗೆದಿದೆ. ಮೈಸೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿಕೆ. ಪಾದಯಾತ್ರೆ ಯಶಸ್ವಿಗೆ ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥನೆ ಸಲ್ಲಿಸಲು ಆಗಮಿಸಿದ್ದ ವಿಜಯೇಂದ್ರ ಮಾಧ್ಯಮಗಳ ಜತೆ ಮಾತನಾಡಿದರು. ಕಾಂಗ್ರೆಸ್‌ ಸರಕಾರದ ವಿರುದ್ಧದ ಪಾದಯಾತ್ರೆಗೆ ಯಡಿಯೂರಪ್ಪ, ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ. ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮಿತಿಮೀರಿದೆ. ತುಳಿತಕ್ಕೆ ಒಳಗಾದ ವರ್ಗಕ್ಕೆ ನ್ಯಾಯ ಸಿಗಬೇಕು. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಮುಡಾ, ವಾಲ್ಮೀಕಿ ಹಗರಣ, ಹಣ ದುರ್ಬಳಕೆ ಸೇರಿದಂತೆ ಹಲವು ವಿಚಾರ ಇಟ್ಟುಕೊಂಡು ಪಾದಯಾತ್ರೆ. ವಿಜಯೇಂದ್ರ ವಿರುದ್ಧ ಡಿಕೆಶಿ ಏಕವಚನ ಪದಪ್ರಯೋಗ ವಿಚಾರ. ಅಧಿಕಾರ ಬಂದಾಗ ಕಾಂಗ್ರೆಸ್‌ನವರಿಗೆ ಈ ರೀತಿ ಆಗುತ್ತೆ. ಅದರ ಬಗ್ಗೆ ನಾನು ಮಾತನಾಡಲ್ಲ. ಪಾದಯಾತ್ರೆ ಮೊಟಕಾಗುವ ಪ್ರಶ್ನೆ ಇಲ್ಲ. ಕಾಂಗ್ರೆಸ್‌ನವರದ್ದು ಪಶ್ಚಾತ್ತಾಪದ ಯಾತ್ರೆ. ಕೊಟ್ಟ ಭರವಸೆ ಈಡೇರಿಸಲು ಆಗಲಿಲ್ಲ ಎಂಬ ಪಶ್ಚಾತ್ತಾಪದಲ್ಲಿ ಕಾರ್ಯಕ್ರಮ ಮಾಡ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ತಮ್ಮ ಭ್ರಷ್ಟಾಚಾರ ಸಮರ್ಥನೆಗೆ ಸರ್ಕಾರವೇ ಇಳಿದಿದೆ. ಚಾಮುಂಡಿ ಬೆಟ್ಟದಲ್ಲಿ ಬಿವೈ ವಿಜಯೇಂದ್ರೆ ಹೇಳಿಕೆ. ಮೈಸೂರು ಚಲೋ : ಬಿಜೆಪಿ ಜೆಡಿಎಸ್ ನಿಂದ ಬೃಹತ್ ಪಾದಯಾತ್ರೆ. ಮೈಸೂರು ಚಲೋ ಹೆಸರಿನಲ್ಲಿ ಬೃಹತ್ ಪಾದಯಾತ್ರೆ. ಇಂದಿನಿಂದ ಆಗಸ್ಟ್ 10ರ ತನಕ ನಡೆಯಲಿರುವ ಪಾದಯಾತ್ರೆ. ಬೆಂಗಳೂರಿನಿಂದ ಮೈಸೂರಿನ ತನಕ ನಡೆಯಲಿರುವ ಪಾದಯಾತ್ರೆ. ಪಾದಯಾತ್ರೆ ಬಳಿಕ ಮೈಸೂರಿನಲ್ಲಿ ಬೃಹತ್ ಸಮಾವೇಶ. ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ನಡೆಯಲಿರುವ ಪಾದಯಾತ್ರೆ. ಸಿಎಂ ವಿರುದ್ಧದ ಹೋರಾಟಕ್ಕೆ ಸಿಎಂ ತವರು ಜಿಲ್ಲೆಯಿಂದಲೇ ರಣಕಹಳೆ. ಚಾಮುಂಡೇಶ್ವರಿ ಮೊರೆ: ಪಾದಯಾತ್ರೆ ಯಶಸ್ಸಿಗೆ ಚಾಮುಂಡೇಶ್ವರಿ ಮೊರೆ. ಇಂದು ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭೇಟಿ. ಪಾದಯಾತ್ರೆ ಆರಂಭಕ್ಕೂ ಮುನ್ನ ಶಕ್ತಿ ದೇವತೆಯ ಆಶೀರ್ವಾದ ಪಡೆದ ಬಿವೈವಿ. : .., , , , ,