ಟಿ-20 ವಿಶ್ವಕಪ್ ಕ್ರಿಕೆಟ್: ಭಾರತ-ಪಾಕ್ ಹೈಟೆನ್ಷನ್ ಮ್ಯಾಚ್’ಗೆ ಕ್ಷಣಗಣನೆ ಬೆಂಗಳೂರು, ಅಕ್ಟೋಬರ್ 23, 2022 (..):ಟಿ20 ವಿಶ್ವಕಪ್ ನಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಇಂದು ಮುಖಾಮುಖಿಯಾಗಲಿವೆ. ಮೆಲ್ಬೋರ್ನ್ ನಲ್ಲಿ ಈ ಪಂದ್ಯ ನಡೆಯುತ್ತಿದ್ದು, ಕಳೆದ ಟಿ20 ವಿಶ್ವಕಪ್ ನಲ್ಲಿ ಪಾಕಿಸ್ತಾನದ ಎದುರು ಪರಾಭವಗೊಂಡಿದ್ದ ಭಾರತ ಆ ಸೇಡನ್ನು ತೀರಿಸಿಕೊಳ್ಳಲು ಸಜ್ಜಾಗಿದೆ. ಈ ಹೈ ವೋಲ್ಟೇಜ್ ಪಂದ್ಯಕ್ಕಾಗಿ ವಿಶ್ವದಾದ್ಯಂತ ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಮಧ್ಯಾಹ್ನ 1:30ಕ್ಕೆ ಪಂದ್ಯ ಆರಂಭವಾಗಲಿದ್ದು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್, ಡಿಸ್ನಿ ಪ್ಲಸ್ ಹಾಟ್ ಸ್ಟಾರ್‌ ನಲ್ಲಿ ಪಂದ್ಯವನ್ನು ವೀಕ್ಷಿಸಬಹುದಾಗಿದೆ.