ಇನ್ನೂ ಯಾವ ಗೊಂದಲಗಳು ಉಳಿದಿಲ್ಲ: ಪಕ್ಷ ಸಂಘಟನೆಯಲ್ಲಿ ತೊಡಗಿದ್ದೇನೆ- ಶಾಸಕ ಜಿ.ಟಿ ದೇವೇಗೌಡ. ಮೈಸೂರು,ಅಕ್ಟೋಬರ್,21,2022(..):ನಾನು ನಿನ್ನೆಯಿಂದಲೇ ಪಕ್ಷ ಸಂಘಟನೆಯಲ್ಲಿ ತೊಡಗಿದ್ದೇನೆ. ಇನ್ನೂ ಯಾವ ಗೊಂದಲಗಳು ಉಳಿದಿಲ್ಲ ಎಂದು ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡರು ತಿಳಿಸಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ‌ ಮೈಸೂರು ಭಾಗದ ಕ್ಷೇತ್ರಗಳ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನ ಶಾಸಕ ಜಿ.ಟಿ ದೇವೇಗೌಡ ಘೋಷಿಸಿದರು. ಚಾಮುಂಡೇಶ್ವರಿಗೆ ಜಿ.ಟಿ.ದೇವೇಗೌಡರು, ಹುಣಸೂರಿಗೆ ಜಿ.ಟಿ.ಡಿ‌ ಮಗ ಹರೀಶ್, ಕೆ.ಆರ್ ನಗರಕ್ಕೆ ಸಾ.ರಾ ಮಹೇಶ್, ಪಿರಿಯಾಪಟ್ಟಣಕ್ಕೆ ಕೆ.ಮಹದೇವ್, ನರಸೀಪುರಕ್ಕೆ ಅಶ್ವಿನ್, ಎಚ್.ಡಿ ಕೋಟೆ ಮಾಜಿ ಶಾಸಕ ಚಿಕ್ಕಣ್ಣ ಪುತ್ರ ಜಯಪ್ರಕಾಶ್ ಗ ಬಹುತೇಕ ಅಂತಿಮ ಎಂದು ಪ್ರಕಟಿಸಿದರು. ಬಳಿಕ ಮಾತನಾಡಿದ ಶಾಸಕ ಜಿ.ಟಿ ದೇವೇಗೌಡರು, ಮನಸ್ಸು ಮೂರು ವರ್ಷಗಳ ನಂತರ ಸಮಾಧಾನದಲ್ಲಿದೆ. ನಾನು ನನ್ನ‌ ಮನೆಯವರು ಹೆಚ್ಚು ಖುಷಿಯಲ್ಲಿದ್ದೇವೆ. ಇನ್ನೂ ಯಾವ ಗೊಂದಲಗಳು ಉಳಿದಿಲ್ಲ. ಚಾಮುಂಡಿ ತಾಯಿಗೆ ಎಚ್‌. ಡಿ ದೇವೇಗೌಡರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇನ್ನೊಂದು ತಿಂಗಳನಲ್ಲಿ ನಾನು ವಾಕ್ ಮಾಡುವ ಶಕ್ತಿಕೊಡು ಎಂದು ತಾಯಿ ಮುಂದೆ ಬೇಡಿದ್ದಾರೆ. ಜನವರಿ ತಿಂಗಳಿನಲ್ಲಿ ಎಚ್.ಡಿ ದೇವೇಗೌಡರು ಚಂಡಿಕ ಹೋಮ ನಡೆಸಲಿದ್ದಾರೆ. ಎಚ್.ಡಿ ದೇವೇಗೌಡರ ಉತ್ಸಾಹ ನಾವೇ ಅಚ್ಚರಿಗೆ ಒಳಗಾಗಿದ್ದೇವೆ. ಅವರೇ ನಮಗೆ ಪ್ರೇರಣೆ. ಅವರನ್ನ ಸಂತೋಷವಾಗಿಡುವುದೇ ನಮ್ಮ ಸಂತೋಷ ಎಂದರು. : - –-- - - .