ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮತ್ತೆ ಭೂ ಕುಸಿತ. ಮೈಸೂರು,ಅಕ್ಟೋಬರ್,21,2022(..):ಕಳೆದ ಮೂರು ದಿನಗಳಿಂದ ಸುರಿದ ಭಾರಿ ಮಳೆಗೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮತ್ತೆ ಭೂಕುಸಿತ ಉಂಟಾಗಿದೆ. ನಂದಿ ಮಾರ್ಗದಲ್ಲಿ ಮತ್ತೆ ರಸ್ತೆ ಕುಸಿದಿದೆ. ಬಾರಿ ಮಳೆಯಿಂದಾಗಿ ಈ ಹಿಂದೆಯೂ ಚಾಮುಂಡಿ ಬೆಟ್ಟದಲ್ಲಿ ರಸ್ತೆ ಕುಸಿದಿತ್ತು. ಇದೀಗ ವೀಕ್ಷಣಾ ಗೋಪುರದ ಪಕ್ಕದಲ್ಲೇ ಕುಸಿದಿದೆ. ಕಳೆದ ಮೂರು ದಿನದಿಂದ ರಾತ್ರಿ ವೇಳೆ ಮಳೆ ಸುರಿಯುತ್ತಿದ್ದು, ಒಂದು ಕಡೆ ರಸ್ತೆ ಕಾಮಗಾರಿ ನಡೆಯುತ್ತಿದ್ದರೇ ಮತ್ತೊಂದೆಡೆ ರಸ್ತೆ ಕುಸಿತವಾಗಿದೆ. ಈ ಹಿಂದೆ ಕುಸಿತ ಕಂಡಿದ್ದ ಜಾಗದಿಂದ ನೂರು ಮೀಟರ್ ದೂರದಲ್ಲಿ ಮತ್ತೆ ರಸ್ತೆ ಕುಸಿದಿದೆ. : - – – .