ಶಿವಣ್ಣನ ಚಿತ್ರಕ್ಕೆ ಜೊತೆಯಾದ ರಾಜ್ ಬಿ.ಶೆಟ್ಟಿ ಬೆಂಗಳೂರು, ಅಕ್ಟೋಬರ್ 21, 2022 (..):ನಟ ಶಿವರಾಜ್‌ಕುಮಾರ್‌ ಅವರೊಂದಿಗೆ ರಾಜ್‌ ಬಿ.ಶೆಟ್ಟಿ ತೆರೆ ಹಂಚಿಕೊಳ್ಳಲಿದ್ದಾರೆ. ಹೌದು. ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿರುವ ಚಿತ್ರದಲ್ಲಿ, ಶಿವರಾಜ್‌ಕುಮಾರ್‌ ಅವರೊಂದಿಗೆ ರಾಜ್‌ ಬಿ.ಶೆಟ್ಟಿ ನಟಿಸಲಿದ್ದಾರೆ. ಅಂದಹಾಗೆ ’45’ ಎಂಬ ಶೀರ್ಷಿಕೆಯಡಿ ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ನಿರ್ಮಾಣವಾಗಲಿರುವ ಈ ಚಿತ್ರಕ್ಕೆ ಸ್ವತಃ ಅರ್ಜುನ್‌ ಜನ್ಯ ಚಿತ್ರಕಥೆ ಬರೆದಿದ್ದಾರೆ. ಯೋಗರಾಜ್‌ ಭಟ್‌ ನಿರ್ದೇಶನದ ‘ಗಾಳಿಪಟ 2’ ಚಿತ್ರವನ್ನು ನಿರ್ಮಾಣ ಮಾಡಿದ್ದ ರಮೇಶ್ ರೆಡ್ಡಿ ಅವರೇ, ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ನಟ, ನಿರ್ದೇಶಕ ಉಪೇಂದ್ರ ಅವರೂ ಈ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ.