ಬನಾರಸ್ ಪ್ರೀ ರಿಲೀಸ್ ಕಾರ್ಯಕ್ರಮಕ್ಕೆ ಸ್ಯಾಂಡಲ್’ವುಡ್ ‘ಡಿ ಬಾಸ್’ ! ಬೆಂಗಳೂರು, ಅಕ್ಟೋಬರ್ 20, 2022 (..):ಝೈದ್ ಖಾನ್ ನಾಯಕನಾಗಿ ನಟಿಸಿರುವ ಬನಾರಸ್ ಚಿತ್ರ ನವೆಂಬರ್ 4ರಂದು ದೇಶಾದ್ಯಂತ ತೆರೆಗಾಣಲಿದೆ. ಜಯತೀರ್ಥ ನಿರ್ದೇಶನದ ಬಹುನಿರೀಕ್ಷಿತ ಚಿತ್ರ ಬನಾರಸ್ ಚಿತ್ರ ತಂಡ ಪ್ರೀ ರಿಲೀಸ್ ಇವೆಂಟ್ ಆಯೋಜಿಸಿದೆ. ವಿಶೇಷ ಎಂದರೆ ಕಾರ್ಯಕ್ರಮಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆಗಮಿಸಲಿದ್ದಾರೆ. ಅಂದಹಾಗೆ ಬನಾರಸ್ ಪ್ರೀ ರಿಲೀಸ್ ಇವೆಂಟ್ ಇದೇ 22ನೇ ತಾರೀಕಿನಂದು ಸಂಜೆ 7.30ಕ್ಕೆ ಸರಿಯಾಗಿ, ಹುಬ್ಬಳ್ಳಿಯ ರೈಲ್ವೇ ಸ್ಪೋರ್ಟ್ಸ್ ಗ್ರೌಂಡ್‌ನಲ್ಲಿ ನಡೆಯಲಿದೆ. ದರ್ಶನ್ ಜತೆ ವಿನೋದ್ ಪ್ರಭಾಕರ್, ಚಿಕ್ಕಣ್ಣ, ಅಭಿಷೇಕ್ ಅಂಬರೀಶ್ ಪಾಲ್ಗೊಳ್ಳಲಿದ್ದಾರೆ.