224 ಕ್ಷೇತ್ರಗಳಲ್ಲಿಯೂ ಜೆಡಿಎಸ್ ಸ್ಪರ್ಧೆ: ನ.1ರಂದು 116 ಅಭ್ಯರ್ಥಿಗಳ ಹೆಸರು ಪ್ರಕಟ- ಮಾಜಿ ಸಿಎಂ ಹೆಚ್.ಡಿಕೆ. ಮೈಸೂರು,ಅಕ್ಟೋಬರ್,19,2022(..):ಜೆಡಿಎಸ್ ಗೆ ಚುನಾವಣಾ ಅಭ್ಯರ್ಥಿಗಳಿಲ್ಲ ಎಂಬ ಆರೋಪ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಕಾಂಗ್ರೆಸ್, ಬಿಜೆಪಿಯವರು ಯಾಕೆ ಜೆಡಿಎಸ್ ಮನೆ ಬಾಗಿಲು ತಟ್ಟುತ್ತಿದ್ದಾರೆ ಎಂದು ಟಾಂಗ್ ನೀಡಿದ್ದಾರೆ. ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ನಾವು 224 ಕ್ಷೇತ್ರದಲ್ಲಿಯೂ ಸ್ಪರ್ಧೆ ಮಾಡುತ್ತೇವೆ ಬೇರೆ ಪಕ್ಷಕ್ಕೆ ನಮ್ಮ ಪಕ್ಷದಿಂದ ಹೋಗುವವರು ಯಾರು ಇಲ್ಲ . ಬೇರೆ ಪಕ್ಷದಿಂದ ಬರುವವರ ಬಗ್ಗೆ ನಾನು ಮಾತನಾಡಲ್ಲ ಎಂದರು. ನವೆಂಬರ್ 1 ರಂದು 126 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಪ್ರಕಟಿಸುತ್ತೇವೆ. ಶಾಸಕ ಜಿಟಿ ದೇವೇಗೌಡರು. ಅನುಮತಿ ಪಡೆದಿದ್ದಾರೆ. ದೊಡ್ಡ ಮಟ್ಟದ ಕಾರ್ಯಕ್ರಮ ಮಾಡಿದ್ದಾಗ ಬರುತ್ತಾರೆ ಎಂದು ಹೆಚ್.ಡಿಕೆ ತಿಳಿಸಿದ್ದಾರೆ. : –- 224 - -..