ಎಐಸಿಸಿ ನೂತನ ಅಧ್ಯಕ್ಷರಾಗಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆಯ್ಕೆ. ನವದೆಹಲಿ,ಅಕ್ಟೋಬರ್,19,2022(..):ಎಐಸಿಸಿ ನೂತನ ಅಧ್ಯಕ್ಷರಾಗಿ ಕರ್ನಾಟಕದ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 17ರಂದು ನಡೆದಿದ್ದ ಚುನಾವಣೆಯ ಫಲಿಂತಾಶ ಇಂದು ಪ್ರಕಟವಾಗಿದ್ದು, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ 24ವರ್ಷದ ಬಳಿಕ ಗಾಂಧೀಯೇತರ ನಾಯಕನಿಗೆ ಅಧ್ಯಕ್ಷ ಪಟ್ಟ ದಕ್ಕಿದೆ. ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು 7897 ಮತಗಳನ್ನು ಪಡೆದುಕೊಂಡು ಗೆಲುವು ಸಾಧಿಸಿದರೇ ಶಶಿ ತರೂರ್ ಅವರು 1072 ಮತ ಪಡೆದು ಸೋಲನುಭವಿಸಿದ್ದಾರೆ. ನೂತನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಶಶಿತರೂರ್ ಅಭಿನಂದನೆ ಸಲ್ಲಿಸಿದ್ದಾರೆ. : – – - … , 19, 2022 (..): (). 17, . . 24 . 7897 , 1072 .: / /