ಕೆಪಿಟಿಸಿಎಲ್ ನೇಮಕಾತಿ ಅಕ್ರಮ ಪ್ರಕರಣ: 20 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು. ಬೆಳಗಾವಿ,ಅಕ್ಟೋಬರ್,18,2022(..):ಕೆಪಿಟಿಸಿಎಲ್ ಕಿರಿಯ ಸಹಾಯಕ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ 20 ಮಂದಿ ಆರೋಪಿಗಳಿಗೆ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಕಿಂಗ್ ಪಿನ್ ಸಂಜು ಭಂಡಾರಿ ಸೇರಿ 20 ಮಂದಿಗೆ ಷರತ್ತುಬದ್ಧ ಜಾಮೀನು ನೀಡಿ ಬೆಳಗಾವಿಯ ಗೋಕಾಕ್ ನ 2ನೇ ಜೆಎಂಎಫ್ ಸಿ ಕೋರ್ಟ್ ಆದೇಶಿಸಿದೆ. ಆಗಸ್ಟ್ 7 ರಂದು ಗೋಕಾಕ್ ನ ಜಿಎಸ್ ಎಸ್ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ನಡೆಸಲಾಗಿತ್ತು. ಪ್ರಕರಣ ಸಂಬಂಧ ಸಿದ್ಧಪ್ಪ ಮದಹಳ್ಳಿಯನ್ನ ಪೊಲೀಸರು ಬಂಧಿಸಿದ್ದರು. ಸ್ಮಾರ್ಟ್ ವಾಚ್ ಬಳಸಿ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದ್ಧ ಎನ್ನಲಾಗಿದೆ. : - - –- 20 –- .