ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ದಿನಾಂಕ ಫಿಕ್ಸ್. ನವದೆಹಲಿ,ಅಕ್ಟೋಬರ್,14,2022(..):ಈ ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ನವೆಂಬರ್ 12ರಂದು ಮತದಾನ ನಡೆಯಲಿದೆ. ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಇಂದು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. 68 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ನವೆಂಬರ್ 12ರಂದು ಮತದಾನ ನಡೆದು ಡಿಸೆಂಬರ್‌ 8ಕ್ಕೆ ಫಲಿತಾಂಶ ಹೊರಬೀಳಲಿದೆ. ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದ್ದು, ಅಕ್ಟೋಬರ್ 17ಕ್ಕೆ ಚುನಾವಣೇ ಅಧಿಸೂಚನೆ ಜಾರಿಯಾಗಲಿದೆ. ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 25 ಕೊನೆ ದಿನವಾಗಿದೆ. ಅಕ್ಟೋಬರ್ 27 ರಂದು ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದ್ದು, ಅ.29ರಂದು ನಾಮಪತ್ರ ವಾಪಸ್ ಪಡೆಯಲು ಕೊನೆ ದಿನವಾಗಿದೆ. : - – –- .