ಇಂದು ಎರಡು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿ. ನವದೆಹಲಿ ಅಕ್ಟೋಬರ್,14,2022(..):ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಇಂದು ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಲಿದೆ. ಹಿಮಾಚಲ ಪ್ರದೇಶದ 68 ಮತ್ತು ಗುಜರಾತ್ ನ 182 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆಯ ನಡೆಯಲಿದ್ದು ಇಂದು ಮಧ್ಯಾಹ್ನ 3 ಗಂಟೆಗೆ ಚುನಾವಣಾ ದಿನಾಂಕ ಪ್ರಕಟವಾಗಲಿದೆ. ಲೋಕಸಭೆ ಚುನಾವಣೆ ಮತ್ತು ದೇಶದ ವಿವಿಧ ರಾಜ್ಯಗಳಲ್ಲಿ ನಡೆಯುವ ಚುನಾವಣೆಗಳ ಮೇಲೆ ಈ ಎರಡೂ ರಾಜ್ಯಗಳ ಚುನಾವಣಾ ಫಲಿತಾಂಶ ಪರಿಣಾಮ ಬೀರುವ ನಿರೀಕ್ಷೆಯಿದೆ. ಹೀಗಾಗಿ ಎಲ್ಲ ರಾಜಕೀಯ ಪಕ್ಷಗಳೂ ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿವೆ. : – – - —-