ಮುಂದಿನ ಅಧಿವೇಶನದಲ್ಲಿ ಕಾಂಗ್ರೆಸ್ ಹಗರಣ ಬಯಲು ಮಾಡುತ್ತೇವೆ- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ. ರಾಯಚೂರು,ಅಕ್ಟೋಬರ್,11,2022(..):ಮುಂದಿನ ಅಧಿವೇಶನದಲ್ಲಿ ಕಾಂಗ್ರೆಸ್ ಹಗರಣಗಳನ್ನು ಬಯಲು ಮಾಡುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್​​ ಯಡಿಯೂರಪ್ಪ ಹೇಳಿದರು. ರಾಯಚೂರು ತಾಲೂಕಿನ ಗಿಲ್ಲೆಸುಗೂರಿನಲ್ಲಿ ನಡೆದೆ ಜನ ಸಂಕಲ್ಪಯಾತ್ರೆಯಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ, ರಾಬರ್ಟ್​ ವಾದ್ರಾ ಮಾಡಿದ್ದ ಹಗರಣಗಳ ಪಟ್ಟಿ ಇದೆ. ನ್ಯಾಷನಲ್​ ಹೆರಾಲ್ಡ್​​​ ಹಗರಣ ಗೊತ್ತಿಲ್ಲವೇ? ಹಗರಣವನ್ನೇ ಮಾಡದ ಪ್ರಧಾನಿ ಮೋದಿ ಬಗ್ಗೆ ಮಾತನಾಡ್ತೀರಾ? 25 ಲಕ್ಷ ಮೌಲ್ಯದ ಹ್ಯೂಬ್ಲೆಟ್​ ವಾಚ್​ ಕೊಟ್ಟಿದ್ಯಾರು ಗೊತ್ತಿಲ್ವಾ? ಸಿದ್ಧರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ. 2023ರ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನಗಳನ್ನ ಗೆಲ್ಲುತ್ತೇವೆ. ಮತ್ತೆ ನಾವೇ ಅಧಿಕಾರದ ಚುಕಾಣಿ ಹಿಡಿಯುತ್ತೇವೆ. ಸಿದ್ಧರಾಮಯ್ಯ ಸಿಎಂ ಕನಸು ಯಾವತ್ತೂ ನನಸಾಗಲ್ಲ. 8 ವರ್ಷ ಪ್ರಧಾನಿ ಮೋದಿ ಪಾರದರ್ಶಕ ಆಡಳಿತ ನೀಡಿದ್ದಾರೆ ಎಂದರು. : -- -