ಗಂಧದಗುಡಿ ಪ್ರಿ ರಿಲೀಸ್ ಇವೆಂಟ್ ಗೆ ಸಿಎಂ ಬೊಮ್ಮಾಯಿ ಆಹ್ವಾನಿಸಿದ ಡಾ.ರಾಜ್ ಕುಟುಂಬ ಬೆಂಗಳೂರು,ಅಕ್ಟೋಬರ್,11,2022(..):ಅಕ್ಟೋಬರ್ 21ರಂದು ನಡೆಯುವ ‘ಗಂಧದ ಗುಡಿ’ ಪ್ರೀ-ರಿಲೀಸ್​ ಇವೆಂಟ್​ ಗೆ ಆಗಮಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಇಂದು ಡಾ.ರಾಜ್ ಕುಟುಂಬ ಆಹ್ವಾನ ನೀಡಿತು. ಪುನೀತ್​ ರಾಜ್​ಕುಮಾರ್ ಅವರ ‘ಗಂಧದ ಗುಡಿ’ ಸಾಕ್ಷ್ಯಚಿತ್ರ ಅ.28ಕ್ಕೆ ಬಿಡುಗಡೆ ಆಗಲಿದೆ. ಈಗಾಗಲೇ ಇದರ ಟ್ರೇಲರ್ ಆಗಿದ್ದು, ಸಖತ್​ ಸದ್ದು ಮಾಡುತ್ತಿದೆ. ಅಕ್ಟೋಬರ್ 21ರಂದು ಪ್ರೀ-ರಿಲೀಸ್​ ಕಾರ್ಯಕ್ರಮ ನಡೆಯಲಿದ್ದು ಪುನೀತ್ ರಾಜ್ ಅವರ ಪತ್ನಿ ಅಶ್ವಿನಿ ಪುನೀತ್​ ರಾಜ್​ಕುಮಾರ್​, ಹಿರಿಯ ನಟ ರಾಘವೇಂದ್ರ ರಾಜ್​ಕುಮಾರ್​, ಯುವ ರಾಜ್​ಕುಮಾರ್​ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಆಹ್ವಾನ ನೀಡಿದರು. ಸಿನಿಮಾದ ರೀತಿ ಚಿತ್ರಮಂದಿರದಲ್ಲೇ ಗಂಧದಗುಡಿ ಸಾಕ್ಷ್ಯಚಿತ್ರ ಬಿಡುಗಡೆ ಆಗಲಿದೆ. ಅ.21ರಂದು ನಡೆಯಲಿರುವ ಪ್ರೀ-ರಿಲೀಸ್​ ಕಾರ್ಯಕ್ರಮಕ್ಕೆ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆ ವಹಿಸಿಕೊಳ್ಳಬೇಕು ಎಂದು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರು ವಿನಂತಿಸಿಕೊಂಡಿದ್ದಾರೆ. ಬೆಂಗಳೂರಿನ ಪ್ಯಾಲೇಸ್​ ಗ್ರೌಂಡ್​ನಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ‘ಪುನೀತ ಪರ್ವ’ ಎಂದು ಕರೆಯಲಾಗುತ್ತಿದೆ. : . - – – ---