ಮೂಗೂರು ತ್ರಿಪುರ ಸುಂದರಿ ದೇವಸ್ಥಾನಕ್ಕೆ ಸಂಸದ ಸುನೀಲ್ ಬೋಸ್ ಭೇಟಿ ಮೈಸೂರು, ಅಕ್ಟೋಬರ್,8,2024 (..):ಶೀಘ್ರದಲ್ಲೇ ಟಿ.ನರಸೀಪುರ ತಾಲ್ಲೂಕಿನಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ ಆಗುತ್ತದೆ ಎಂದು ಚಾಮರಾಜನಗರ ಸಂಸದ ಸುನೀಲ್ ಬೋಸ್ ಹೇಳಿದರು. ಇಂದು ಟಿ. ನರಸೀಪುರ ತಾಲ್ಲೂಕಿನ ಮೂಗೂರು ಗ್ರಾಮದಲ್ಲಿರುವ ಮೂಗೂರು ತ್ರಿಪುರ ಸುಂದರಿ ದೇವಾಲಯಕ್ಕೆ ಸಂಸದ ಸುನಿಲ್ ಬೋಸ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಕೆ ಮಾಡಿದರು. ಈ ವೇಳೆ ಸಂಸದ ಸುನಿಲ್ ಬೋಸ್ ಗೆ ಕಾಂಗ್ರೆಸ್ ಕಾರ್ಯಕರ್ತರು ಅಭಿನಂದನೆ ಸಲ್ಲಿಸಿದರು. ಬಳಿಕ ಮಾತನಾಡಿದ ಸಂಸದ ಸುನೀಲ್ ಬೋಸ್, ಮನೆ ದೇವರ ದರ್ಶನಕ್ಕೆ ಬಂದಿದ್ದೇನೆ. ನರಸೀಪುರ ಕ್ಷೇತ್ರದ ಹಲವು ಅಭಿವೃದ್ಧಿಗೆ ಅನುದಾನ ಬಿಡುಗಡೆಯಾಗಿದೆ. ನಮ್ಮ ತಂದೆಯವರು ಕ್ಷೇತ್ರಕ್ಕೆ ಬಂದು ತುಂಬಾ ದಿನ ಆಗಿದೆ. ಅವರ ಸಮ್ಮುಖದಲ್ಲೇ ಚಾಲನೆ ಸಿಗಲಿ ಎಂಬುದಕ್ಕೆ ಕಾಯುತ್ತಿದ್ದೇವೆ. ಎಲ್ಲಾ ಕ್ಷೇತ್ರಗಳಲ್ಲೂ ಕ್ರೀಡಾಂಗಣ ಇದೆ. ಟಿ. ನರಸೀಪುರ ಕ್ಷೇತ್ರದಲ್ಲಿ ಕ್ರೀಡಾಂಗಣ ಇಲ್ಲ. ಸಿದ್ದರಾಮಯ್ಯ, ಮಹದೇವಪ್ಪ ಇಬ್ಬರು ಪ್ರತಿನಿಧಿಸುವ ಕ್ಷೇತ್ರ ನರಸೀಪುರ. ಹೀಗಾಗಿ ಕ್ರೀಡಾಂಗಣ ನಿರ್ಮಾಣಕ್ಕೆ ಸ್ಥಳ ಗುರುತಿಸುವ ಕೆಲಸ ನಡೆಯುತ್ತಿದೆ. ಶೀಘ್ರದಲ್ಲೇ ನರಸೀಪುರ ತಾಲ್ಲೂಕಿನಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ ಆಗುತ್ತದೆ ಎಂದು ಸುನಿಲ್ ಬೋಸ್ ತಿಳಿಸಿದರು. : , , ,