ಪೋಕ್ಸೋ ಪ್ರಕರಣ: ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ . ಚಿತ್ರದುರ್ಗ,ಅಕ್ಟೋಬರ್,10,2022(..):ಪೋಕ್ಸೋ ಪ್ರಕರಣದಡಿ ಬಂಧಿತರಾಗಿರುವ ಚಿತ್ರದುರ್ಗ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನದ ಅವಧಿ ಮತ್ತೆ ವಿಸ್ತರಣೆಯಾಗಿದೆ. ಅಕ್ಟೋಬರ್ 21 ರವರೆಗೆ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನದ ಅವಧಿಯನ್ನ ವಿಸ್ತರಣೆ ಮಾಡಿ ಚಿತ್ರದುರ್ಗ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಅಪ್ರಾಪ್ತ ವಿದ್ಯಾರ್ಥಿನೀಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಮುರುಘಾ ಮಠದ ಶಿವಮೂರ್ತಿ ಶ್ರೀಗಳ ಬಂಧನವಾಗಿದೆ. ಜಾಮೀನು ಕೋರಿ ಮುರುಘಾ ಶ್ರೀಗಳು ಅರ್ಜಿ ಸಲ್ಲಿಸಿದ್ದಾರೆ. : --- – .