ಉತ್ತರ ಪ್ರದೇಶ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ನಿಧನ. ಉತ್ತರ ಪ್ರದೇಶ, ಅಕ್ಟೋಬರ್,10,2022(..):ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್(82) ನಿಧನರಾಗಿದ್ದಾರೆ. ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಮುಲಾಯಂ ಸಿಂಗ್ ಯಾದವ್ ಅವರನ್ನು ಗುರುಗ್ರಾಮ್‌ ನ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಕ್ಟೋಬರ್ 2 ರಂದು ತೀವ್ರ ಅನಾರೋಗ್ಯದ ಕಾರಣ ಮುಲಾಯಂ ಸಿಂಗ್ ಅವರನ್ನು ಐಸಿಯುಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮುಲಾಯಂ ಸಿಂಗ್ ಯಾದವ್ ಕೊನೆಯುಸಿರೆಳೆದಿದ್ದಾರೆ. ಮುಲಾಯಂ ಸಿಂಗ್ ಯಾದವ್ ಮೂರು ಬಾರಿ ಉತ್ತರಪ್ರದೇಶ ಸಿಎಂ ಆಗಿದ್ದರು. 10 ಬಾರಿ ಶಾಸಕ 7 ಬಾರಿ ಸಂಸದರಾಗಿ ಸೇವೆ ಸಲ್ಲಿಸಿದ್ದರು. ಭಾರತ ಸರ್ಕಾರದ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. : - - - . … , 10, 2022 (..): ’ (82) . . 2. , . 10 7 . .: / /