ಎಸ್.ಸಿ ಮತ್ತು ಎಸ್.ಟಿ ಮೀಸಲಾತಿ ಹೆಚ್ಚಳ ನಿರ್ಣಯಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ. ಬೆಂಗಳೂರು,ಅಕ್ಟೋಬರ್,8,2022(..):ಎಸ್ .ಸಿ ಮತ್ತು ಎಸ್.ಟಿ ಮೀಸಲಾತಿ ಹೆಚ್ಚಳ ಮಾಡುವ ಸಂಬಂಧ ನಿನ್ನೆ ಸರ್ವಪಕ್ಷ ಸಭೆಯಲ್ಲಿ ಕೈಗೊಳ್ಳಲಾಗಿದ್ಧ ನಿರ್ಣಯವನ್ನ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಲಾಗಿದೆ. ಎಸ್.ಸಿ ಮೀಸಲಾತಿ ಪ್ರಮಾಣ ಶೇ.15ರಿಂದ ಶೇ.17ಕ್ಕೆ ಮತ್ತು ಎಸ್.ಟಿ ಮೀಸಲಾತಿ ಪ್ರಮಾಣ ಶೇ.5 ರಿಂದ ಶೇ.7ಕ್ಕೆ ಹೆಚ್ಚಳ ಮಾಡಲು ನಿನ್ನೆ ಸರ್ವಪಕ್ಷ ಸಭೆಯಲ್ಲಿ ನಿರ್ಣಯ ಮಾಡಲಾಗಿತ್ತು. ಈ ನಿರ್ಣಯಕ್ಕೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ನ್ಯಾ. ನಾಗಮೋಹನ್ ದಾಸ್ ವರದಿ ಅನುಷ್ಠಾನಕ್ಕೆ ಸರ್ಕಾರ ಒಪ್ಪಿಗೆ ನೀಡಿದೆ. ಸಭೆ ಬಳಿಕ ಮಾತನಾಡಿದ ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ, ನಾಗಮೋಹನ್ ದಾಸ್ ವರದಿಗೆ ಸಂಪೂರ್ಣವಾಗಿ ಒಪ್ಪಿದ್ದೇವೆ. ಉಭಯ ಸದನದಲ್ಲಿ ಮಸೂದೆ ಅಂಗೀಕಾರವಾಗಲಿದೆ. ಅಂಗೀಕಾರದ ಬಳಿಕ ಕೇಂದ್ರ ಸರ್ಕಾರಕ್ಕೆ ಕಳಿಸುತ್ತೇವೆ. ಕೇಂದ್ರದಿಂದ ಅನುಮತಿ ಸಿಕ್ಕ ಬಳಿಕ ಮೀಸಲಾತಿ ಅಧಿಕೃತವಾಗಿ ಹೆಚ್ಚಿಸುತ್ತೇವೆ ಎಂದರು. : --- - – - … /, 8, 2022 (..): /, - , . - , 15% 17%, 5% 7% . . . . , .. . “ . .,” .: / / //