ನಿವೃತ್ತಿ ನಿರ್ಧಾರ ಘೋಷಿಸಿದ ಲಿಯೋನೆಲ್ ಮೆಸ್ಸಿ ಬೆಂಗಳೂರು, ಅಕ್ಟೋಬರ್ 07, 2022 (..):ಅರ್ಜೆಂಟೀನಾದ ಸೂಪರ್ ಸ್ಟಾರ್ ಪುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ ಪುಟ್ಬಾಲ್ ಆಟಕ್ಕೆ ನಿವೃತ್ತಿಯನ್ನು ಘೋಷಿಸಿದ್ದಾರೆ. 2022 ರ ಕತಾರ್ ವಿಶ್ವಕಪ್ ತಮ್ಮ ಕೊನೆಯ ವಿಶ್ವಕಪ್ ಎಂದು ಲಿಯೋನೆಲ್ ಮೆಸ್ಸಿ ಹೇಳಿದ್ದಾರೆ. ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು, ‘ಖಂಡಿತವಾಗಿಯೂ ಇದು ನನ್ನ ಕೊನೆಯ ವಿಶ್ವಕಪ್. ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ’ಎಂದು ಮೆಸ್ಸಿ ಹೇಳಿಕೊಂಡಿದ್ದಾರೆ. ಪಂದ್ಯಾವಳಿಗಾಗಿ ನಾನು ಕಾಯುತ್ತಿದ್ದೇನೆ. ಉತ್ತಮ ಆಟವನ್ನು ಆಡೋದಕ್ಕೆ ಉತ್ಸುಕನಾಗಿದ್ದೇನೆ ಎಂದು ಮೆಸ್ಸಿ ತಿಳಿಸಿದ್ದಾರೆ.