ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ. ಕಲ್ಬುರ್ಗಿ,ಅಕ್ಟೋಬರ್,6,2022(..):ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲ್ಬುರ್ಗಿಯಲ್ಲಿ ನಡೆದಿದೆ. ಕಲ್ಬುರ್ಗಿಯ ಬಸಂತನಗರದಲ್ಲಿ ಈ ಘಟನೆ ನಡೆದಿದೆ. ಲಕ್ಷ್ಮಿಪುತ್ರ(45) ಹತ್ಯೆಯಾದ ವ್ಯಕ್ತಿ ಹಣಕಾಸಿನ ವಿಚಾರಕ್ಕೆ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಸಂಬಂಧಿಗಳಿಗೆ ಲಕ್ಷ್ಮಿಪುತ್ರ 8 ಲಕ್ಷ ಹಣ ನೀಡಿದ್ದು ಹಣ ವಾಪಸ್ ಕೇಳಿದ್ದಕ್ಕೆ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಕುರಿತು ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : – - -