ಕಾರು ಅಪಘಾತ: ಶಾಸಕ ಅರವಿಂದ ಬೆಲ್ಲದ್ ಅವರ ಚಿಕ್ಕಪ್ಪ ಸಾವು. ಧಾರವಾಡ,ಅಕ್ಟೋಬರ್,6,2022(..):ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಶಾಸಕ ಅರವಿಂದ್ ಬೆಲ್ಲದ್ ಅವರ ಚಿಕ್ಕಪ್ಪ ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಧಾರವಾಡದ ಎಸ್.ಪಿ ಕಚೇರಿ ಎದುರು ನಿನ್ನೆ ತಡರಾತ್ರಿ ಈ ಘಟನೆ ಸಂಭವಿಸಿದೆ ಶಾಸಕ ಅರವಿಂದ್ ಬೆಲ್ಲದ್ ಅವರ ಚಿಕ್ಕಪ್ಪ ಶಿವಣ್ಣ ಬೆಲ್ಲದ್(82) ಮೃತಪಟ್ಟವರು. ರಸ್ತೆ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಶಿವಣ್ಣ ಬೆಲ್ಲದ್ ಅವರನ್ನ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. : --- - - .